dtvkannada

ಬೆಂಗಳೂರು: ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಲಿಗೆ ಪರಿಷತ್ ಚುನಾವಣೆ ಪ್ರತಿಷ್ಠೆಯ ಕದನವಾಗಿ ಬದಲಾಗಿದೆ. ಸದ್ಯ ಇಂದು ಮತ ಎಣಿಕೆ ಕಾರ್ಯ ನಡೆದಿದ್ದು 25 ಸ್ಥಾನ, 3 ಪಕ್ಷ ಮತ್ತು 90 ಅಭ್ಯರ್ಥಿಗಳ ಹಣೆಬರಹ ಒಂದೊಂದಾಗಿ ಹೊರ ಬೀಳುತ್ತಿದೆ. ಸದ್ಯ ಈಗ ಬೆಂಗಳೂರು ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ಎಸ್. ಗೋಪಿನಾಥ್ ಗೆಲುವು ಸಾಧಿಸಿದ್ದು ಕಾಂಗ್ರೆಸ್ ಅಭ್ಯರ್ಥಿ, ಸಾವಿರಾರು ಕೋಟಿಯ ಒಡೆಯ ಯೂಸಫ್ ಷರೀಫ್(ಕೆಜಿಎಫ್ ಬಾಬು) ಸೋಲನುಭವಿಸಿದ್ದಾರೆ.



ಬಿಜೆಪಿ ಅಭ್ಯರ್ಥಿಯಾಗಿ ಎಚ್‌.ಎಸ್‌.ಗೋಪಿನಾಥ್, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಯೂಸಫ್‌ ಷರೀಫ್‌ ಮತ್ತು ಪಕ್ಷೇತರ ಅಭ್ಯರ್ಥಿ ಶೀನಪ್ಪ ಕಣದಲ್ಲಿದ್ದರು. ಆದರೆ, ಗೋಪಿನಾಥ್‌ ಮತ್ತು ಕೆಜಿಎಫ್ ಬಾಬು‌ ನಡುವೆ ನೇರ ಹಣಾಹಣಿ ಇತ್ತು. ಗೋಪಿನಾಥ್‌ ಈ ಹಿಂದೆ ಕೂಡ ಚುನಾವಣಾ ಕಣಕ್ಕಿಳಿದಿದ್ದು, ಕೆಲವೇ ಮತಗಳ ಅಂತರಲ್ಲಿ ಸೋಲನ್ನು ಅನುಭವಿಸಿದ್ದರು. ಬಿಇ ಪದವೀಧರ ಆಗಿರುವ ಗೋಪಿನಾಥ್‌ ಅವರು ಬಿಜೆಪಿಯಲ್ಲಿ ಹಲವು ಹುದ್ದೆ ನಿರ್ವಹಿಸಿದ್ದರು.

ಕಾಂಗ್ರೆಸ್‌ನ ಯೂಸಫ್‌ ಷರೀಫ್‌ ಅಲಿಯಾಸ್ ಕೆಜಿಎಫ್ ಬಾಬು ರಾಜಕೀಯದಲ್ಲಿ ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿದ್ದಾರೆ. ಆದ್ರೆ ಪರಿಷತ್ ಚುನಾವಣೆಯಲ್ಲಿ ಸೋಲುಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಎಂಟಿಬಿ ನಾಗರಾಜ್ ಅವರನ್ನೂ ಮೀರಿಸಿ 1743 ಕೋಟಿ ರು. ಆಸ್ತಿಯ ಒಡೆಯನಾಗಿರುವುದು ಚುನಾವಣಾ ಅಖಾಡದಲ್ಲಿ ಗಮನ ಸೆಳೆದಿತ್ತು.

By dtv

Leave a Reply

Your email address will not be published. Required fields are marked *

error: Content is protected !!