ಉಪ್ಪಿನಂಗಡಿ: ಹಳಗೇಟು ತಲ್ವಾರ್ ಇರಿತ ಘಟನೆಗೆ ಸಂಬಂಧಿಸಿದಂತೆ ಫಿ.ಎಫ್.ಐ ನಾಯಕರ ಬಂಧನವ ಖಂಡಿಸಿ ಬೆಳಿಗ್ಗೆಯಿಂದ PFI ಕಾರ್ಯಕರ್ತರು ಠಾಣೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಇದೀಗ ರಸ್ತೆ ತಡೆ ನಡೆಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮುಂದುವರೆಸಿದ್ದಾರೆ.
ಪ್ರತಿಭಟನೆ ಕಾವು ಮತ್ತಷ್ಟು ಹೆಚ್ಚಾಗುತ್ತಲೇ ಇದೆ.
ರಸ್ತೆ ತಡೆ ನಡೆಸಿ ರಸ್ತೆಯಲ್ಲೇ ಕುಳಿತು ಪೊಲೀಸರ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ಮುಂದುವರಿಸಿದ್ದು, ನಾಯಕರ ಬಿಡುಗಡೆ ಮಾಡುವವರೆಗೂ ಪ್ರತಿಭಟನೆ ಮುಂದುವರಿಯುವ ಸಾಧ್ಯತೆಯಿದೆ.