';
}
else
{
echo "Sorry! You are Blocked from seeing the Ads";
}
?>
ಊಟಿ: ತಮಿಳು ನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇಂದು ನಿಧನರಾಗಿದ್ದಾರೆ.
ಡಿ. 8ರಂದು ನಡೆದ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಸೇನಾಧಿಕಾರಿಗಳು ಸೇರಿ 13 ಮಂದಿ ಮೃತಪಟ್ಟಿದ್ದರು. ವರುಣ್ ಸಿಂಗ್ ಮಾತ್ರ ಬದುಕುಳಿದಿದ್ದರು. ಶೇ.45ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಅವರಿಗೆ ಅಂದಿನಿಂದಲೂ ಚಿಕಿತ್ಸೆ ನೀಡಲಾಗುತ್ತಿತ್ತು.