ಉಪ್ಪಿನಂಗಡಿ: ಡಿ.14ರಂದು ಉಪ್ಪಿನಂಗಡಿಯಲ್ಲಿ ನಡೆದ ಅಹಿತಕರ ಘಟನೆಗೆ ಸಂಭಂದಿಸಿದಂತೆ ಪಿಎಸ್‌ಐ ಓಮನ ಎನ್.ಕೆ ನೀಡಿದ ದೂರಿನಂತೆ ಪಿಎಫ್‌ಐ ಸಂಘಟನೆಯ ಪ್ರಮುಖ ನಾಯಕರು ಸೇರಿದಂತೆ ಸುಮಾರು ಇಪ್ಪತ್ತಕ್ಕೂ ಅಧಿಕ ಮಂದಿಯ ಮೇಲೆ ಪ್ರಕರಣ ದಾಖಲಾಗಿದೆ.

ಪ್ರತಿಭಟನಾ ಸಮಯದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ಮಾಡಿದ್ದಾರೆ ಎಂದು ಪಿಎಸ್‌ಐ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.