';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಬೈಕ್ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ಡಿ.20 ರಂದು ಬೆಳಗ್ಗೆ ನಡೆದಿದೆ.
ತಿಂಗಳಾಡಿ ಕಡೆಯಿಂದ ಪುತ್ತೂರು ಕಡೆ ಬರುತ್ತಿದ್ದ ಕೆಟಿಎಂ ಬೈಕ್ ಹಾಗೂ ಕೊಲ್ಲಾಜೆ ಒಳರಸ್ತೆಯಿಂದ ಬಂದ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸವಾರರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಅಂಬ್ಯೂಲೆನ್ಸ್ ಬರಲು ತಡವಾದ ಕಾರಣ ಅವರನ್ನು ಆಪೆ ರಿಕ್ಷಾ ಮೂಲಕ ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಸ್ಕೂಟರ್ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಒಳರಸ್ತೆಯಿಂದ ಏಕಾಏಕಿ ಮುಖ್ಯರಸ್ತೆಗೆ ಸ್ಕೂಟರ್ ಬಂದ ಕಾರಣ, ಮುಖ್ಯ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸಂಪ್ಯ ಠಾಣಾ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>