ಬೆಳ್ತಂಗಡಿ: ಆಲ್ಟೋ ಕಾರು ಮರಕ್ಕೆ ಡಿಕ್ಕಿ ಹೊಡೆದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿವಾಸಿ ಮೃತಪಟ್ಟ ದಾರುಣ ಘಟನೆ ಬೇಲೂರು ಸಮೀಪದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಬೆಳ್ತಂಗಡಿ ತಾಲೂಕಿನ ಪೆರಾಲ್ದರಕಟ್ಟೆ ನಿವಾಸಿ ಶರೀಫ್ ಎಂದು ಗುರುತಿಸಲಾಗಿದೆ.
ಬೆಳ್ತಂಗಡಿಯಿಂದ ನಾಲ್ವರು ಸ್ನೇಹಿತರು ಜೊತೆಯಾಗಿ ದರ್ಗಾ ಝೀಯಾರತ್ ಗಾಗಿ ಚಿಕ್ಕಮಗಳೂರು ಭಾಗಕ್ಕೆ ತೆರಳಿ ವಾಪಾಸಾಗುತ್ತಿದ್ದಾಗ ಆಲ್ಟೊ ಕಾರು ಮರಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಸಹಪ್ರಯಾಣಿಕರಾಗಿದ್ದ ಲಾಯಿಲ ಗ್ರಾಮದ ಕುಂಟಿನಿ ನಿವಾಸಿ ನೂರ್ ಮುಹಮ್ಮದ್, ಬಳಂಜದ ಅಝೀಝ್ ಹಾಗೂ ಕಕ್ಕಿಂಜೆಯ ಗಾಂಧಿ ನಗರ ನಿವಾಸಿ ಸಲೀಂ ಗಾಯಗೊಂಡಿದ್ದು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.