';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಶಾರ್ಕ್ ಸರ್ಕೂಟ್’ನಿಂದ ಸಿಲಿಂಡರ್ ಬ್ಲಾಸ್ಟ್ ಆಗಿ ಇಬ್ಬರು ಗಾಯಗೊಂಡು ಅದೃಷ್ಟವಶಾತ್ ಉಳಿದವರು ಪ್ರಾಣಾಪಾಯದಿಂದ ಪಾರಾದ ಘಟನೆ ಹೆಬ್ಬಾಳ ಬಳಿ ಮಸೀದಿಯ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ .
ಅನಿಲ ಸೋರಿಕೆಯಾಗಿ ಮಸೀದಿಯ ಒಳಗೆ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಗ್ಯಾಸ್ ಲೀಕ್ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಘಟನೆ ನಡೆಯುವ ವೇಳೆ ಮಸೀದಿಯ ಒಳಗೆ ಇದ್ದವರೆಲ್ಲರೂ ಹೊರಗೆ ಬಂದಿದ್ದಾರೆ. ನಂತರ ಸಿಲಿಂಡರ್ ಸ್ಫೋಟವಾಗಿದೆ.
ನಾಗವಾರ ಹೆಬ್ಬಾಳಕ್ಕೆ ತೆರಳುವ ರಸ್ತೆಯಲ್ಲಿ ಘಟನೆ ನಡೆದಿದೆ. ಮಸೀದಿ ಅವರಣದಲ್ಲಿ ಗ್ಯಾಸ್ ಸ್ಟೌ ರಿಪೇರಿ ಅಂಗಡಿಯಿತ್ತು. ಅಂಗಡಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್ನಿಂದ ಘಟನೆ ಸಂಭವಿಸಿದೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಗೋವಿಂದ ಪುರ ಪೊಲೀಸರು ಭೇಟಿ ನೀಡಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>