dtvkannada

ಬೆಂಗಳೂರು: ದೇಶದಲ್ಲಿ ಒಮೈಕ್ರಾನ್ ಪ್ರಕರಣಗಳು ತೀವ್ರವಾಗಿ ಹೆಚ್ಚಳವಾಗುತ್ತಿರುವುದರಿಂದ ಮಹಾರಾಷ್ಟ್ರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದರೆ, ಇದೀಗ ತಮಿಳುನಾಡಿನಲ್ಲೂ ಸೋಂಕು ತೀವ್ರಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎನ್ನಬಹುದು. ಆದ್ದರಿಂದ ರಾಜ್ಯದಲ್ಲಿ ಈ ಬಗ್ಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಲು ಡಿ.26ರಂದು ತಜ್ಞರ ಜೊತೆ ಸಭೆ ನಡೆಸಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರಿಕೆಗೆ ತಿಳಿಸಿದ್ದಾರೆ.



ವಿಜಯಪುರ ಪ್ರವಾಸದಲ್ಲಿರುವ ಮುಖ್ಯಮಂತ್ರಿ ವಿಜಯಪುರದ ಗಾಂಧಿ ವೃತ್ತದ ಬಳಿಯ ಹುಟ್ಟು ಹಬ್ಬದ ಸಲುವಾಗಿ ಅಟಲ್ ಬಿಹಾರಿ ವಾಜಪೇಯಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಗಡಿಗಳಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗುತ್ತಿದೆ. ನೈಟ್ ಕರ್ಫ್ಯೂ ಸೇರಿದಂತೆ ಹೊಸ ವರ್ಷಾಚರಣೆ ವೇಳೆ ರಾಜ್ಯದಲ್ಲಿ ಒಂದಿಷ್ಟು ಕಠಿಣ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಬಗ್ಗೆ ರವಿವಾರ ತಜ್ಞರ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದರು.

By dtv

Leave a Reply

Your email address will not be published. Required fields are marked *

error: Content is protected !!