dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ರೂಪಾಂತರಿ ಒಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಇಂದು (ಡಿ.26) ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ರಾಜ್ಯದಾದ್ಯಂತ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸಿ ಘೋಷಿಸಿದ್ದಾರೆ. ಡಿ.28ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ ಅಂತ ಸಚಿವರು ತಿಳಿಸಿದ್ದಾರೆ.



ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಹೊಸ ವರ್ಷ ಆಚರಿಸುವಂತಿಲ್ಲ. ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.  ಅಲ್ಲದೇ ಹಗಲಿನಲ್ಲೂ ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಮಿತಿಗೊಳಿಸಲಾಗಿದೆ ಅಂತ ತಿಳಿಸಿದ್ದಾರೆ. ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ 50:50 ನಿಯಮ ಜಾರಿಗೊಳಿಸಿದ ಕರ್ನಾಟಕ ಸರ್ಕಾರ,  ಸಿನಿಮಾ ಥಿಯೇಟರ್ಗಳಿಗೆ ಸದ್ಯ ಈ ನಿಮಯ ಅನ್ವಯವಾಗಲ್ಲ ಅಂತ ತಿಳಿಸಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!