dtvkannada

ಪುತ್ತೂರು: ಪಾರ್ಕಿಂಗ್ ವ್ಯವಸ್ಥೆ ಸರಿಯಾಗಿ ಕಲ್ಪಿಸದ ಸಭಾಭವನದ ಮಾಲೀಕರ ವಿರುಧ್ದ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ.

ಗೂಗಲ್ ಚಿತ್ರಗಳುಕುಂಬ್ರ – ಪರ್ಪುಂಜ ಸಮೀಪದ ಅಬ್ರೊಡ್ ಮದಕಂ ಮತ್ತು ಶಿವಕೃಪಾ ಸಭಾ ಭವನದಲ್ಲಿ ಡಿ.26ರಂದು ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದವರು ತಮ್ಮ ತಮ್ಮ ವಾಹನಗಳನ್ನು ರಸ್ತೆ ಬದಿಯಲ್ಲೇ ನಿಲ್ಲಿಸಿ ಹೋಗಿದ್ಜ ಕಾರಣ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದ್ದು, ಕೆಲವು ಹೊತ್ತು ಟ್ರಾಫಿಕ್ ಜಾಮ್ ಕೂಡ ಆಗಿತ್ತು.

ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸದೇ, ರಸ್ತೆಗೆ ಅಡಚಣೆಉಂಟು ಮಾಡಿದ ಎರಡೂ ಸಭಾ ಭವನದ ಮಾಲಕರ ವಿರುದ್ಧ ಐಪಿಸಿ ಸೆಕ್ಷನ್ 283 ರ ಜೊತೆಗೆ 34ರ ಸೆಕ್ಷನ್ ಅಡಿಯಲ್ಲಿ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!