';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ರಾಜ್ಯದ ಮಕ್ಕಳಿಗೆ ಹಾಲು ಕೊಟ್ಟ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ.
ಸಾಹಿತಿ ಎಸ್.ಜಿ ಸಿದ್ದರಾಮಯ್ಯ ಅವರ ‘ಯರೆಬೇವು’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಹಂಸಲೇಖ, ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ. ಅವರು ಧರ್ಮೋಕ್ರಸಿ ಬದಿಗೆ ಸರಿಸಿ ಡೆಮೋಕ್ರಸಿ ಉಳಿಸಲಿ ಎಂದು ಹೇಳಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಿನ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಬಸವಜಯಂತಿ ದಿನ ಅಧಿಕಾರ ಸ್ವೀಕರಿಸುವ ಅವಕಾಶ ಸಿದ್ದರಾಮಯ್ಯನವರಿಗೆ ಸಿಕ್ಕಿತ್ತು. ಅಧಿಕಾರ ವಹಿಸಿಕೊಂಡ ತಕ್ಷಣವೇ ಅನ್ನಭಾಗ್ಯ ಘೋಷಿಸಿದರು. ಇದರಿಂದ ಸೋಮಾರಿಗಳಿಗೆ ಪ್ರೋತ್ಸಾಹ ಕೊಟ್ಟಂತಾಗಲಿದೆ ಎಂದು ಹಲವರು ಟೀಕಿಸಿದ್ದರು. ದಾಸೋಹ ಪರಂಪರೆ ಗೊತ್ತಿದ್ದರೆ ಹೀಗೆ ಟೀಕೆ ಮಾಡುತ್ತಿರಲಿಲ್ಲ. ಸಿದ್ದರಾಮಯ್ಯಗೆ ಶರಣ ಪರಂಪರೆ ಬಗ್ಗೆ ದೊಡ್ಡ ಅರಿವು ಇದೆ ಎಂದು ಅಭಿಪ್ರಾಯಪಟ್ಟರು.