';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಕಡಬ: ಅಪರಿಚಿತ ವಾಹನವೊಂದು ಡಿಕ್ಕಿಯಾದ ಕಾರಣ ಚಿರತೆ ಮರಿಯೊಂದು ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಹೆದ್ದಾರಿಯಲ್ಲಿ ಸಂಭವಿಸಿದೆ.
ಕಡಬದ ಹಳೇಸ್ಟೇಷನ್ ಬಳಿ ಈ ಘಟನೆ ಪತ್ತೆಯಾಗಿದೆ. ರಸ್ತೆ ದಾಟುವ ಸಂದರ್ಭ ಚಿರತೆಮರಿಯು ಯಾವುದೋ ಅಪರಿಚಿತ ವಾಹನದ ಅಡಿಗೆ ಬಿದ್ದು ಗಂಭೀರ ಗಾಯಗೊಂಡು ರಕ್ತ ಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.
ರಸ್ತೆ ಬದಿಯಲ್ಲಿ ಬಿದ್ದ ಚಿರತೆಯನ್ನು ಇಂದು ಮುಂಜಾನೆ ಕಂಡ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಮಹಜರು ನಡೆಸಿ ಪ್ರಕರಣ ದಾಖಲು ಮಾಡಿರುತ್ತಾರೆ.