ಬೆಳ್ತಂಗಡಿ: ಕಾರುಗಳ ಮದ್ಯೆ ಢಿಕ್ಕಿ ಹೊಡೆದ ಘಟನೆ ಬೆಳ್ತಂಗಡಿ ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ನಾರಾವಿ ಅರಸ್ ಕಟ್ಟೆ ಎಂಬಲ್ಲಿ ಇಂದು ನಡೆದಿದೆ.
ಬೆಳ್ತಂಗಡಿಯಿಂದ ಕಾರ್ಕಳದತ್ತ ತೆರಳುತ್ತಿದ್ದ ತೂಫಾನ್ ಕಾರು ಮತ್ತು ಅದರ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿದ್ದ ಕಿಯಾ ಕಾರುಗಳ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಸಹ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.
ತೂಫಾನ್ ಕಾರು ಓವರ್ ಟೆಕ್ ಮಾಡುವ ರಭಸದಲ್ಲಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು, ಬೆಂಗಳೂರುನತ್ತ ತೆರಳುತ್ತಿದ್ದ ಕಾರು ಎಂದು ತಿಳಿದುಬಂದಿದೆ.
ಘಟನೆಯಿಂದ ಕೆಲವು ಸಮಯ ಟ್ರಾಫಿಕ್ ಜಾಮ್ ಉಂಟಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಟ್ರಾಫಿಕ್ ಜಾಮ್ ಮುಕ್ತಗೊಳಿಸಿದರು.