ಸಕಲೇಶಪುರ: ಅಪರಿಚಿತ ಮಹಿಳೆಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸಕಲೇಶಪುರದ ಶಿರಾಡಿ ಘಾಟಿ ಬಳಿ ನಡೆದಿದೆ.

ಮಹಿಳೆಯ ಶವವು ಕೊಳೆತು ಹೋಗಿರುವುದರಿಂದ ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯ ಜನರು ಅಭಿಪ್ರಾಯಪಟ್ಟಿದ್ದಾರೆ.
ಮೃತದೇಹವನ್ನು ಅಂಬ್ಯುಲೆನ್ಸ್ ಮೂಲಕ ಸಕಲೇಶಪುರದ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.