dtvkannada

ಚಿಕ್ಕಬಳ್ಳಾಪುರ: ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಈ ಬಾರಿ ನ್ಯೂ ಇಯರ್ ಪಾರ್ಟಿಗೆ ನಿರ್ಬಂಧ ಹೇರಿದೆ. ಹೀಗಿದ್ದೂ ಕೆಲವರು ಮಾತ್ರ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ರೆಸಾರ್ಟ್ನಲ್ಲಿ ಮಸ್ತ್ ಪಾರ್ಟಿ ಮಾಡಿದ್ದಾರೆ. ಅಲ್ಲದೇ ಪಾರ್ಟಿ ಬಗ್ಗೆ ಪ್ರಶ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಮೇಲೆಯೇ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದಾರೆ. ಈ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿಯ ರೆಸಾರ್ಟ್ನಲ್ಲಿ ನಡೆದಿದೆ.ಆರೋಪಿಗಳು ಅರೆಸ್ಟ್:
ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಹೊಸ ವರ್ಷ ಆಚರಿಸಿ, ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ 8 ಆರೋಪಿಗಳನ್ನು ನಂದಿಗಿರಿಧಾಮ ಠಾಣೆ ಪೊಲೀಸರು ಬಂಧಿಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!