ಬೆಂಗಳೂರು: ಕೊರೊನಾದ ಬಗ್ಗೆ ಇಂದು ತಜ್ಞರ ಜೊತೆ ನಡೆಸಿದ ಮಹತ್ವದ ಸಭೆ ಸುಮಾರು ಎರಡುವರೆ ಗಂಟೆಗಳ ನಂತರ ಅಂತ್ಯ ಕಂಡಿದೆ.
ಸಿ.ಎಂ ನೇತೃತ್ವದಲ್ಲಿ ಇಂದು ಸಿ.ಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ಮಹತ್ವದ ಸಭೆ ಕರೆದಿದ್ದರು.
ತಜ್ಞರು ಹಲವಾರು ಅಭಿಪ್ರಾಯಗಳನ್ನು ಸರ್ಕಾರದ ಮುಂದಿರಿಸಿದ್ದು ಓಮಿಕ್ರಾನ್ ಹೋರಾಟದಲ್ಲಿ ಆ ಅಭಿಪ್ರಾಯಗಳನ್ನು ಪೂರಕಗೊಳಿಸಿ ಸರ್ಕಾರ ಮಹತ್ವದ ಹೆಜ್ಜೆ ಇಡಲಿದೆ.
ಮಹತ್ವದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್ಲೈನ್ ತರಗತಿ ನಿಲ್ಲುತ್ತದೆ. ಶಾಲಾ ಕಾಲೇಜುಗಳು ಆನ್ಲೈನ್ ವಿಧಾನದಲ್ಲಿ ನಡೆಯುತ್ತದೆ. 6ನೇ ತಾರೀಖಿನಿಂದ ಜಾರಿಯಾಗುವಂತೆ ವೀಕೆಂಡ್ ಕರ್ಫ್ಯೂ ಇರಲಿದೆ ಎಂದಿದ್ದಾರೆ.
ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಟ್ ಕರ್ಫ್ಯೂ ಇರುತ್ತದೆ. ಆಹಾರ ವಸ್ತು, ಹೊಟೆಲ್ಗಳಲ್ಲಿ ಪಾರ್ಸೆಲ್, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಂತರ ಸಚಿವರಾದ ಆರ್. ಅಶೋಕ್, ಡಾ.ಕೆ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.