dtvkannada

ಬೆಂಗಳೂರು: ಕೊರೊನಾದ ಬಗ್ಗೆ ಮಂಗಳವಾರ ತಜ್ಞರ ಜೊತೆ ನಡೆಸಿದ ಮಹತ್ವದ ಸಭೆ ಸುಮಾರು ಎರಡುವರೆ ಗಂಟೆಗಳ ನಂತರ ಅಂತ್ಯ ಕಂಡಿದೆ.
ಸಿ.ಎಂ ನೇತೃತ್ವದಲ್ಲಿ ನಿನ್ನೆ ಸಿ.ಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ಮಹತ್ವದ ಸಭೆ ಕರೆದಿದ್ದರು.
ತಜ್ಞರು ಹಲವಾರು ಅಭಿಪ್ರಾಯಗಳನ್ನು ಸರ್ಕಾರದ ಮುಂದಿರಿಸಿದ್ದು ಓಮಿಕ್ರಾನ್ ಹೋರಾಟದಲ್ಲಿ ಆ ಅಭಿಪ್ರಾಯಗಳನ್ನು ಪೂರಕಗೊಳಿಸಿ ಸರ್ಕಾರ ಹೊಸ ಆದೇಶ ಜಾರಿಗೊಳಿಸಿದೆ.ಮಹತ್ವದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್ಲೈನ್ ತರಗತಿ ನಿಲ್ಲುತ್ತದೆ. ಶಾಲಾ ಕಾಲೇಜುಗಳು ಆನ್ಲೈನ್ ವಿಧಾನದಲ್ಲಿ ನಡೆಯುತ್ತದೆ. 6ನೇ ತಾರೀಖಿನಿಂದ ಜಾರಿಯಾಗುವಂತೆ ವೀಕೆಂಡ್ ಕರ್ಫ್ಯೂ ಇರಲಿದೆ ಎಂದಿದ್ದಾರೆ.

ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಟ್ ಕರ್ಫ್ಯೂ ಇರುತ್ತದೆ. ಆಹಾರ ವಸ್ತು, ಹೊಟೆಲ್ಗಳಲ್ಲಿ ಪಾರ್ಸೆಲ್, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಂತರ ಸಚಿವರಾದ ಆರ್. ಅಶೋಕ್‌, ಡಾ.ಕೆ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಶಾಲೆಗಳು ಗುರುವಾರದಿಂದ ಬಂದ್‌ ಆಗಲಿವೆ. ಆದರೆ, 10,11 ಮತ್ತು 12 ನೇ ತರಗತಿಗಳಿಗೆ ಮಾತ್ರ ಶಾಲೆ–ಕಾಲೇಜುಗಳು ನಡೆಯಲಿವೆ. 1ರಿಂದ 9ರ ವರೆಗಿನ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳು ನಡೆಯಲಿವೆ. ವೈದ್ಯಕೀಯ, ಅರೆ ವೈದ್ಯಕೀಯ, ನರ್ಸಿಂಗ್ ಕಾಲೇಜುಗಳು ಮಾತ್ರ ನಡೆಯಲಿವೆ. ಪದವಿ, ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಭೌತಿಕ ತರಗತಿ ನಡೆಯುವುದಿಲ್ಲ.

ರಾ‌ಜ್ಯದ ಉಳಿದ ಜಿಲ್ಲೆಗಳ ಶಾಲಾ ಕಾಲೇಜಗಳು ಯಥಾರೀತಿ ನಡೆಯಲಿವೆ. ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಸಚಿವ ಅಶೋಕ್ ಹೇಳಿದರು.

ವಾರಾಂತ್ಯ ಕರ್ಫ್ಯೂ: ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗುತ್ತದೆ. ಈ ವೇಳೆ, ಹೊರಜಿಲ್ಲೆ, ರಾಜ್ಯಗಳಿಂದ ಬರುವವರಿಗೆ ವಾಹನಗಳ ಟಿಕೆಟ್ ಇದ್ದರೆ ಅಡ್ಡಿ ಇರುವುದಿಲ್ಲ. ಅನಗತ್ಯ ಓಡಾಟಗಳಿಗೆ ನಿರ್ಬಂಧ ವಿಧಿಸಲಾಗುತ್ತದೆ.

ಆದರೆ, ದಿನಸಿ ಅಂಗಡಿ, ಹಾಲು, ತರಕಾರಿ, ಔಷಧ, ಪೆಟ್ರೋಲ್ ಮತ್ತಿತರ ಅಗತ್ಯ ವಸ್ತುಗಳ ಖರೀದಿಗೆ ನಿರ್ಬಂಧ ಇರುವುದಿಲ್ಲ. ಕರ್ಫ್ಯೂ ಅವಧಿಯಲ್ಲಿ ಹೋಟೆಲ್‌ಗಳಲ್ಲಿ ಪಾರ್ಸೆಲ್ ಸೇವೆ ಮಾತ್ರ ಇರುತ್ತದೆ ಎಂದು ಸಚಿವ ಅಶೋಕ ಹೇಳಿದರು.

ಬಸ್‌, ರೈಲು, ಮೆಟ್ರೊ, ಆಟೋ ಸೇವೆಗಳಿಗೆ ವಾರದ ದಿನಗಳಲ್ಲಿ ನಿರ್ಬಂಧ ಇರುವುದಿಲ್ಲ.

ರಜಾದಿನ ಬಿಟ್ಟು ವಾರದ ಎಲ್ಲ ದಿನಗಳಲ್ಲಿ ಕೇಂದ್ರ ಸರ್ಕಾರ ಜಾರಿ ಮಾಡಿರುವಂತೆ ಸರ್ಕಾರಿ ಕಚೇರಿಗಳಲ್ಲಿ ಶೇ 50ರಷ್ಟು ಸಿಬ್ಬಂದಿ 50:50 ಅನುಪಾತದಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ. ಚಿತ್ರ ಮಂದಿರ, ಬಾರ್, ಪಬ್, ರೆಸ್ಟೋರೆಂಟ್‌ಗಳಲ್ಲಿ ಕೂಡ ಒಟ್ಟು ಆಸನ ಸಾಮರ್ಥ್ಯದ ಶೇ 50ರಷ್ಟು ಆಸನಗಳನ್ನು ಭರ್ತಿ ಮಾಡಲು ಅವಕಾಶ ನೀಡಲಾಗಿದೆ. ಕರ್ಫ್ಯೂ ದಿನಗಳಲ್ಲಿ ಪಾರ್ಸೆಲ್‌ ಮಾತ್ರ ಅವಕಾಶ ನೀಡಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!