';
}
else
{
echo "Sorry! You are Blocked from seeing the Ads";
}
?>
ಕೊಪ್ಪ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತರಗತಿಗಳಿಗೆ ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಬರುವುದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಮಂಗಳವಾರ ಕಾಲೇಜು ಆವರಣದಲ್ಲಿ ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿದರು.
ಕೆಲವು ವಿದ್ಯಾರ್ಥಿಗಳು ಸೋಮವಾರ ಕೇಸರಿ ಶಾಲು ಧರಿಸಿ ಬಂದಿದ್ದರು. ಮಂಗಳವಾರ ಪ್ರತಿಭಟನೆ ಮುಂದುವರಿಸಿ, ಕಾಲೇಜು ಆಡಳಿತ ಮಂಡಳಿ ವಿರುದ್ಧವೂ ಘೋಷಣೆ ಕೂಗಿದರು. ಸಮವಸ್ತ್ರ ವಿಚಾರದಲ್ಲಿ ಆಡಳಿತ ಮಂಡಳಿ ಭೇದ ಭಾವ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತರಗತಿಗಳಿಗೆ ಗೈರು ಹಾಜರಾಗಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಾಲೇಜು ಪ್ರಾಂಶುಪಾಲ ಡಾ. ಎಸ್.ಅನಂತ, ‘ಜ.10ರಂದು ಪೋಷಕರ ಸಭೆ ಕರೆದು ತೀರ್ಮಾನ ಕೈಗೊಳ್ಳುವ ವರೆಗೆ ವಿದ್ಯಾರ್ಥಿಗಳು ಶಾಂತ ರೀತಿಯಿಂದ ವರ್ತಿಸಬೇಕು’ ಎಂದು ಹೇಳಿದರು. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ವಾಪಸ್ ಪಡೆದರು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>