ಮಂಗಳೂರು: ಕೊರೋನ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿರುವ ಕಾರಣ ರಾಜ್ಯ ಸರಕಾರ ಹೊರಡಿಸಿರುವ ವಾರಾಂತ್ಯ ಕರ್ಫ್ಯೂ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ.
ವೀಕೆಂಡ್ ಕರ್ಫ್ಯೂ ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 5ರವರೆಗೆ ಇರಲಿದೆ. ವೀಕೆಂಡ್ ಕರ್ಫ್ಯೂ ವೇಳೆ ವಿವಾಹ, ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶವಿದೆ. ಕಾರ್ಯಕ್ರಮದಲ್ಲಿ 200 ಜನರಿಗೆ ಅನುಮತಿ ಮಾತ್ರ ನೀಡಲಾಗಿದ್ದು, ವಾರಾಂತ್ಯ ಕರ್ಪ್ಯೂ ವೇಳೆ ತರಕಾರಿ, ದಿನಸಿ ಸೇರಿ ದಿನಬಳಕೆಯ ಅಗತ್ಯ ವಸ್ತುಗಳ ಅಂಗಡಿ ತೆರೆಯಲು ಅವಕಾಶವಿದೆ.
ವೀಕೆಂಡ್ ವೇಳೆ ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ.
ರಾಜ್ಯ ಸರಕಾರ ಹೊರಡಿಸಿದ ಚಾಲ್ತಿಯಲ್ಲಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ತೆರೆದ ಸ್ಥಳಗಳಲ್ಲಿ 200ಕ್ಕಿಂತ ಹೆಚ್ಚು ಜನರು ಮೀರದಂತೆ ಮತ್ತು ಮುಚ್ಚಿದ ಸ್ಥಳಗಳಲ್ಲಿ 100ಕ್ಕಿಂತ ಜನರು ಮೀರದಂತೆ ವಿವಾಹ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಲಾಗಿದೆ.
ವಾರಂತ್ಯ ಕರ್ಫ್ಯೂ ಮಾರ್ಗಸೂಚಿಗಳು: