';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಳಗಾವಿ: ತಲೆಯ ಮೇಲೆ ಕಲ್ಲು ಎತ್ತಿಹಾಕಿ ಆಟೋ ಚಾಲಕನ ಕೊಲೆ ಮಾಡಿರುವ ಘಟನೆ ಬೆಳಗಾವಿ ಹೊರವಲಯದ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಆಟೋ ಚಾಲಕ ನೊಹಾನ್ ಧಾರವಾಡಕರ್(25) ಬರ್ಬರ ಹತ್ಯೆಯಾದ ಯುವಕ.
5 ದಿನದ ಹಿಂದೆ ಆಟೋ ಸಮೇತ ಮನೆಯಿಂದ ಹೊರ ಹೋಗಿದ್ದ ಆಟೋ ಚಾಲಕ ನೊಹಾನ್ ಶವವಾಗಿ ಪತ್ತೆಯಾಗಿದ್ದಾರೆ.
ನಿನ್ನೆ ತಡರಾತ್ರಿ ಗಾಂಧಿನಗರದ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಜನ ಪ್ರದೇಶದಲ್ಲಿ ಆಟೋ ಪತ್ತೆಯಾಗಿದ್ದು ಪಾಳು ಬಿದ್ದ ಮನೆಯ ಶೌಚಾಲಯದಲ್ಲಿ ಚಾಲಕನ ಶವ ಸಿಕ್ಕಿದೆ. ಸ್ನೇಹಿತರೇ ನೊಹಾನ್‌ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.