dtvkannada

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ನಡೆದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸರು ವಶಪಡಿಸಿಕೊಂಡಿದ್ದ ಪಿಎಫ್ಐ ಮುಖಂಡರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಡಿ.14ರಂದು ನಡೆದ ಪ್ರತಿಭಟನೆಯ ಸಂದರ್ಭ ಬಂಟ್ವಾಳ ಗ್ರಾಮಾಂತರ ಠಾಣಾ ಉಪ ನಿರೀಕ್ಷಕ ಪ್ರಸನ್ನ ಕುಮಾರ್‌ ಅವರಿಗೆ ಚೂರಿಯಿಂದ ತಿವಿದು ಕೊಲೆ ಯತ್ನ ಆರೋಪ ಸೇರಿದಂತೆ ಇನ್ನಿತರ ಅಹಿತಕರ ಘಟನೆಗೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕು ಮಡಂತ್ಯಾರು ಕುಕ್ಕಳ ಗ್ರಾಮದ ಬೋರುಗುಡ್ಡೆ ನಿವಾಸಿ ಮಹಮ್ಮದ್‌ ಹನೀಫ್ (41) ಬಂಧಿತ. ಈತನನ್ನು ಮಂಗಳವಾರ ಅಪರಾಹ್ನ ಮಡಂತ್ಯಾರು ಪಂ. ಕಚೇರಿ ಬಳಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಒಮ್ಮೆ ಐವರು ಬಳಿಕ ಇಬ್ಬರನ್ನು ಬಂಧಿಸಲಾಗಿತ್ತು. ಘಟನೆಯ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಕೃತ್ಯಕ್ಕೆ ಸಂಬಂಧಿಸಿ ಅದೇ ದಿನ 10 ಮಂದಿಯನ್ನು ಬಂಧಿಸಲಾಗಿತ್ತು. ಡಿ. 14ರ ಘಟನಾವಳಿಯಲ್ಲಿ ಈವರೆಗೆ ಒಟ್ಟು 18 ಮಂದಿಯ ಬಂಧನವಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!