ಬೆಂಗಳೂರು: ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡ ನಮ್ಮ ನೀರು ನಮ್ಮ ಹಕ್ಕು ಮೇಕೆದಾಟು ಪಾದಯಾತ್ರೆಯನ್ನು ತಕ್ಷಣವೇ ನಿಲ್ಲಿಸಬೇಕೆಂದು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಹೆಚ್ಚುತ್ತಿರುವ ಓಮಿಕ್ರಾನ್ ಹಿನ್ನಲೆ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್ ಇದೀಗ ಚಾಟಿ ಬೆನ್ನಲ್ಲೇ ಸರ್ಕಾರ ಪಾದ ಯಾತ್ರೆ ನಿರ್ಬಂಧಿಸಿ C.S ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
4 ದಿನಗಳಿಂದ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದ್ದು ಸಹಸ್ರಾರು ಮಂದಿಗಳು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.
ಹೆಚ್ಚುತ್ತಿರುವ ಓಮಿಕ್ರಾನ್ ಹಿನ್ನೆಲೆಯಲ್ಲಿ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು ಇದೀಗ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ಆದೇಶಗಳನ್ನು ಪಾಲಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ C.S ರವಿಕುಮಾರ್ ರವರು ಹೇಳಿದ್ದಾರೆ.