';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಸಕಲೇಶಪುರ: ಗೋಮಾಂಸ ಮಾರಾಟ ಮಾಡುತ್ತಿದ್ದಾರೆ ಎಂಬ ನೆಪ ಹೇಳಿ ಹೋಟೆಲ್ ಸಿಬ್ಬಂದಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಎನ್ನಲಾದ ಸುಮಾರು 10 ಮಂದಿಯ ಗುಂಪು ಹಲ್ಲೆ ಮಾಡಿದ ಘಟನೆ ಇಂದು ಸಂಜೆ ಮಾರನಹಳ್ಳಿ ‘ಹಿಲ್ ಟಾಪ್’ ಹೋಟೆಲ್ ನಲ್ಲಿ ನಡೆದಿದೆ.
ಸಕಲೇಶಪುರದ ಮಾರನಹಳ್ಳಿಯಲ್ಲಿರುವ ಹಿಲ್ ಟಾಪ್ ಹೋಟೆಲ್’ನಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಬಂದ ಗುಂಪೊಂದು ಗೋ ಮಾಂಸದ ನೆಪ ಹೇಳಿ ಕಿರಿಕ್ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಹೋಟೆಲ್ ಸಿಬ್ಬಂದಿ ಹಾಗೂ ಮಾಲಕ ನಿಗೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಹಲ್ಲೆಗೊಳಗಾದವರನ್ನು ಹೊಟೇಲ್ ಕಾರ್ಮಿಕರಾದ ರಿಝ್ವಾನ್(24) ಹಾಗೂ ಅಮಿತ್(42) ಎಂದು ತಿಳಿದು ಬಂದಿದೆ. ಗಾಯಗೊಂಡ ಇಬ್ಬರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.