ಉಡುಪಿ: ಯುವಕನೊಬ್ಬ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಚ್ಚಿಲ ಕುಂಜೂರು ಸಮೀಪ ನಿನ್ನೆ ತಡರಾತ್ರಿ ನಡೆದಿದೆ. ರೈಲಿನಡಿಗೆ ಬಿದ್ದ ಯುವಕನ ದೇಹ ಸಂಪೂರ್ಣ ಛಿದ್ರಛಿದ್ರವಾಗಿದ್ದು, ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಮೃತಪಟ್ಟ ವ್ಯಕ್ತಿಯನ್ನು ರಾಜೇಶ್ ಶೆಟ್ಟಿ (35) ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ರೈಲು ಹಳಿಯ ಮಧ್ಯೆ ಅಡ್ಡಲಾಗಿ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರೈಲು ಚಲಿಸಿದ ರಭಸಕ್ಕೆ ದೇಹ ಸಂಪೂರ್ಣ ಛಿದ್ರಛಿದ್ರವಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪಡುಬಿದ್ರಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮೃತ ದೇಹವನ್ನು ಸಮಾಜ ಸೇವಕ ಮೈಮುನಾ ಫೌಂಡೇಶನ್ ಸಂಸ್ಥಾಪಕ ಆಸಿಫ್ ಆಪದ್ಬಾಂಧವ ಅವರ ತಂಡ ಕಾರ್ಯಾಚರಿಸಿ, ಪಡುಬಿದ್ರಿ ಶವಾಗಾರಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
