ಭಾರತದ ಏಕದಿನ ಹಾಗೂ ಟಿ20 ತಂಡದ ನಾಯಕತ್ವಕ್ಕೆ ಇತ್ತೀಚೆಗಷ್ಚೇ ರಾಜಿನಾಮೆ ನೀಡಿದ್ದ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಾಯಕತ್ವಕ್ಕೂ ರಾಜಿನಾಮೆ ನೀಡಿದ್ದಾರೆ. ಇಂದು ಶನಿವಾರ ತಮ್ಮ ಟ್ವಿಟರ್ ಖಾತೆ ಹಾಗೂ ಸಾಮಾದಿಕ ಜಾಲತಾಣಗಳಲ್ಲಿ ಅಧಿಕೃತ ಮಾಹಿತಿ ನೀಡಿದ್ದಾರೆ. ಈ ಮೂಲಕ ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೆಟ್ ನಾಯಕತ್ವದಿಂದ ವಿರಾಟ್ ಕೊಹ್ಲಿ ಕೆಳಗಿಳಿದಿದ್ದಾರೆ.
ನಿನ್ನೆಯಷ್ಟೇ ದಕ್ಷಿಣ ಆಫ್ರಿಕ ವಿರುದ್ದದ ಸರಣಿ ಮುಗಿದಿತ್ತು. ಸರಣಿಯಲ್ಲಿ 1-2 ಅಂತರಗಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಸೋಲು ಕಂಡಿತ್ತು. ಇದಾದ ಬಳಿಕ ಇಂದು ಕೊಹ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಟ್ವಿಟರ್ ಮೂಲಕ ತಮ್ಮ ಅಚ್ಚರಿಯ ನಿರ್ಧಾರವನ್ನು ತಿಳಿಸಿದ ವಿರಾಟ್ ಕೊಹ್ಲಿ, ಕಳೆದ ಎರಡು ತಿಂಗಳ ಅವಧಿಯಲ್ಲಿ ಭಾರತ ತಂಡದ ಮೂರೂ ಮಾದರಿಯ ಕ್ರಿಕೆಟ್ ನ ನಾಯಕ ಸ್ಥಾನದಿಂದ ಕೆಳಗಿಳಿದಂತಾಗಿದೆ. ಏಕದಿನ ಹಾಗೂ ಟಿ20 ಮಾದರಿಯ ನಾಯಕತ್ವವನ್ನು ಈಗಾಗಲೇ ಬಿಸಿಸಿಐ, ರೋಹಿತ್ ಶರ್ಮಗೆ ನೀಡಿದ್ದರೆ, ಟೆಸ್ಟ್ ತಂಡಕ್ಕೆ ಯಾರು ನಾಯಕರಾಗಲಿದ್ದಾರೆ ಎನ್ನುವ ಕುತೂಹಲ ಈಗ ಆರಂಭವಾಗಿದೆ.
2014-15ರ ಋತುವಿನಲ್ಲಿ ಎಂಎಸ್ ಧೋನಿ ಟೆಸ್ಟ್ ತಂಡದ ನಾಯಕ ಸ್ಥಾನಕ್ಕೆ ಹಠಾತ್ ಆಗಿ ರಾಜೀನಾಮೆ ನೀಡಿದ ಬಳಿಕ, ಆಸ್ಟ್ರೇಲಿಯಾ ಪ್ರವಾಸದ ಸರಣಿಯಲ್ಲಿಯೇ ಪೂರ್ಣ ಪ್ರಮಾಣದ ಟೆಸ್ಟ್ ತಂಡದ ನಾಯಕರಾಗಿ ನೇಮಕವಾಗಿದ್ದ ವಿರಾಟ್ ಕೊಹ್ಲಿ, ಈವರೆಗೂ ಅಡಿದ 68 ಪಂದ್ಯಗಳಿಂದ 40 ಗೆಲುವು ದಾಖಲಿಸಿದ ಶ್ರೇಯ ಹೊಂದಿದ್ದಾರೆ. ಆ ಮೂಲಕ ಗೆಲುವುಗಳ ಲೆಕ್ಕಾಚಾರದಲ್ಲಿ ಭಾರತೀಯ ಕ್ರಿಕೆಟ್ ನ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ಎನ್ನುವ ಶ್ರೇಯ ಇವರದಾಗಿದೆ.
ಟ್ವಿಟರ್ ನಲ್ಲಿ ತಮ್ಮ ಪೋಸ್ಟ್ ಹಂಚಿಕೊಂಡಿರುವ ವಿರಾಟ್ ಕೊಹ್ಲಿ ನಾಯಕನ ಜವಾಬ್ದಾರಿಯನ್ನು ಸೂಕ್ತವಾಗಿ ನಿರ್ವಹಿಸುವಲ್ಲಿ ಕಾರಣರಾದ ಬಿಸಿಸಿಐ, ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಹಾಗೂ ಮಾಜಿ ನಾಯಕ ಎಂಎಸ್ ಧೋನಿಗೆ ಥ್ಯಾಂಕ್ಸ್ ಹೇಳಿದ್ದಾರೆ. ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಭಾರತ ತಂಡ, ತವರಿನಲ್ಲಿ ಅತ್ಯಂತ ಬಲಿಷ್ಠ ತಂಡವಾಗಿ ರೂಪುಗೊಂಡಿತ್ತು