dtvkannada

'; } else { echo "Sorry! You are Blocked from seeing the Ads"; } ?>

ಸಿದ್ದಾಪುರ, ಜ.15: ಕಾಡಾನೆ ದಾಳಿಯಿಂದ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ಸಿದ್ಧಾಪುರ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸಿದ್ದಾಪುರದ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಲ್ವತೇಕ್ರೆ ಗ್ರಾಮದ ಕಬೀರ್ ಮತ್ತು ಸಮೀರಾ ದಂಪತಿಗಳ ಪುತ್ರ ವಿದ್ಯಾರ್ಥಿ ಆಶಿಕ್ (19) ಮೃತ ವಿದ್ಯಾರ್ಥಿ , ಮತ್ತೋರ್ವ ವಿದ್ಯಾರ್ಥಿ ಅಸ್ಮಿಲ್ (19) ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಮೃತ ವಿದ್ಯಾರ್ಥಿಯ ಮನೆಗೆ SDPI ನಿಯೋಗ ಭೇಟಿ:
ಕಾಡಾನೆ ದಾಳಿಗೆ ಬಲಿಯಾದ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಲ್ವತೇಕ್ರೆ ಗ್ರಾಮದ ವಿದ್ಯಾರ್ಥಿಯ ಕುಟುಂಬಕ್ಕೆ ಸರಕಾರ ರೂ 25 ಲಕ್ಷ ಪರಿಹಾರ ನೀಡುವಂತೆ ಎಸ್.ಡಿ.ಪಿ.ಐ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಒತ್ತಾಯಿಸಿದರು.

ಮೃತ ವಿದ್ಯಾರ್ಥಿ ಮೊಹಮ್ಮದ್ ಆಶಿಕ್ ಮನೆಗೆ ಭೇಟಿ ನೀಡಿದ ಎಸ್.ಡಿ.ಪಿ.ಐ ನಿಯೋಗ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

'; } else { echo "Sorry! You are Blocked from seeing the Ads"; } ?>

ಕಳೆದ ಹಲವು ದಶಕಗಳಿಂದ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ನಿರಂತರವಾಗಿ ನಡೆಯುತ್ತಿದ್ದು, 50 ಕ್ಕೂ ಹೆಚ್ಚು ಅಮಾಯಕ ಜೀವಗಳು ಬಲಿಯಾಗಿವೆ. ನೂರಾರು ವ್ಯಕ್ತಿಗಳು ಅಂಗವೈಕಲ್ಯದಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಹಲವು ಕುಟುಂಬಗಳು ಬದುಕುವ ಸ್ವಾತಂತ್ರ್ಯವನ್ನೇ ಕಳೆದುಕೊಂಡಿದ್ದಾರೆ. ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಬಹಳಷ್ಟು ಕುಟುಂಬಗಳಿಗೆ ವರ್ಷಗಳೇ ಕಳೆದರೂ ನಯಾ ಪೈಸೆಯ ಪರಿಹಾರ ಸಿಕ್ಕಿಲ್ಲ. ಬೆಳೆಗಾರರ ಫಸಲು ನಾಶವಾಗುತ್ತಿದೆ. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ರೂಪಿಸುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. ಜಿಲ್ಲೆಯ ಜ್ವಲಂತ ಸಮಸ್ಯೆಯ ಬಗ್ಗೆ ಗಂಭೀರವಾಗಿ ಪರಿಗಣಿಸಿ ಪರಿಹಾರ ಕಂಡುಕೊಳ್ಳಬೇಕಾದ ಜಿಲ್ಲೆಯನ್ನು ಪ್ರತಿನಿಧಿಸುವ ಸಂಸದರು ಹಾಗೂ ಶಾಸಕರು ಕೊಡಗು ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದರು.

ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಹಾಗೂ ಗಾಯಗೊಂಡಿರುವ ವಿದ್ಯಾರ್ಥಿಗ ಚಿಕಿತ್ಸೆಗಾಗಿ ಸರಕಾರ ಸೂಕ್ತ ಪರಿಹಾರ ನೀಡಬೇಕೆಂದು ಅಫ್ಸರ್ ಕೊಡ್ಲಿಪೇಟೆ ಒತ್ತಾಯಿಸಿದರು.
ನಿಯೋಗದಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶಫಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಉಸ್ಮಾನ್, ಗ್ರಾಮ ಪಂಚಾಯತಿ ಸದಸ್ಯ ಸಂಶೀರ್, ಪ್ರಮುಖರಾದ ಅಶ್ರಫ್, ಶೌಕತ್, ಸಲೀಂ ಇದ್ದರು.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!