';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಕಡಬ: ಮನೆಗೆ ಬಾರದೇ ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ವಿವಾಹವಾಗಿ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾಳೆ.
ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯ(22) ಬುಧವಾರದಂದು ಮನೆಯಿಂದ ಏಕಾಏಕಿ ನಾಪತ್ತೆಯಾಗಿದ್ದಳು.
ಬುಧವಾದಂದು ಮನೆಯಿಂದ ಹೋದ ಯುವತಿ ರಾತ್ರಿಯಾದರೂ ಮನೆಗೆ ಮರಳದ ಕಾರಣ ಯುವತಿಯ ತಂದೆ ಕಡಬ ಠಾಣೆಯಲ್ಲಿ ದೂರು ನೀಡಿದ್ದರು. ತಂದೆ ನೀಡಿದ ದೂರಿಂನಂತೆ ಕಡಬ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ಬೆನ್ನುಬಿದ್ದ ಪೊಲೀಸರು ಯುವತಿ ಹಾಗೂ ಆಕೆಯ ಪ್ರಿಯಕರ ರುಕ್ಮಯ ಮುಗೇರರನ್ನು ಧರ್ಮಸ್ಥಳ ದಲ್ಲಿ ಪತ್ತೆಹಚ್ಚಿ ಠಾಣೆಗೆ ಕರೆದುಕೊಂಡು ಬಂದಿದ್ದು ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು ಮದುವೆಯಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.