ಸಿನಿಮಾ; ವಾರಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ನಟಿ ರೈಮಾ ಇಸ್ಲಾಂ ಶಿಮು ಢಾಕಾದ ಹೊರವಲಯದಲ್ಲಿ ಗೋಣಿಚೀಲವೊಂದರಲ್ಲಿ ಅರೆಬರೆ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಆಕೆಯ ಶವ ಕಳೆದ ಸೋಮವಾರ ಕೆರಣಿಗಂಜ್‌ನ ಹಜರತ್‌ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಅರೆಬರೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ರೈಮಾ ಇಸ್ಲಾಂ ಶಿಮು ನಾಪತ್ತೆಯಾದ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಭಾನುವಾರ ಕಲಬಾಗನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸ್ಥಳೀಯರು ಈ ಕುರಿತು ಮಾಹಿತಿ ನೀಡಿದ ನಂತರ ಕೆರಣಿಗಂಜ್ ಮಾದರಿ ಠಾಣೆಯ ಪೊಲೀಸರ ತಂಡ ಮೃತದೇಹವನ್ನು ಹೊರತೆಗೆದಿದೆ.
ಬಾಂಗ್ಲಾದೇಶದ ನಟಿ ರೈಮಾ ದೇಹದ ಮೇಲೆ ಹಲವು ಗಾಯದ ಗುರುತುಗಳಿವೆ. ರೈಮಾ ಇಸ್ಲಾಂ ಶಿಮು ಅವರನ್ನು ಕೊಲೆ ಮಾಡಿ, ನಂತರ ಅವರ ಮೃತದೇಹವನ್ನು ಸೇತುವೆಯ ಬಳಿ ಎಸೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರೈಮಾ ಇಸ್ಲಾಂ ಶಿಮು ಅವರ ಪತಿ ಶೇಖಾವತ್ ಅಲಿ ನೊಬೆಲ್ ಮತ್ತು ಅವರ ಚಾಲಕನನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ.
ಪೊಲೀಸ್ ವಿಚಾರಣೆ ವೇಳೆ ನೊಬೆಲ್ ತಾನೇ ತನ್ನ ಹೆಂಡತಿ ರೈಮಾಳನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ನೊಬೆಲ್ ತನ್ನ ಹೆಂಡತಿಯನ್ನು ಕೊಲೆ ಮಾಡಲು ಬಹುಶಃ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ.
ತನ್ನ ಮೇಲೆ ಅನುಮಾನ ಬರಬಾರದು ಎಂದು ರೈಮಾ ನಾಪತ್ತೆಯಾಗಿದ್ದಾಳೆ ಎಂದು ಆಕೆಯ ಗಂಡ ನೊಬೆಲ್ ಭಾನುವಾರ (ಜನವರಿ 16) ಕಲಬಗನ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.