ಬೆಳ್ಳಾರೆ: ಸವಣೂರು ಕಡೆ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಮೂವರು ಗಾಯಗೊಂಡ ಬಗ್ಗೆ ವರದಿಯಾಗಿದೆ.

ಕಾರಿನಲ್ಲಿ ಮದುಮಗ ಸಹಿತ ಐದು ಮಂದಿ ಸಂಚರಿಸುತ್ತಿದ್ದ ವೇಳೆ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮೋರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.
ಅಪಘಾತದ ತೀವ್ರತೆಗೆ ಕಾರಿನ ಏರ್‌ಬೇಗ್ ಓಪನ್ ಆಗಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಗಿದ್ದು ಮದುಮಗನಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಸಾರ್ವಜನಿಕರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.