ಪಡುಬಿದ್ರಿ: ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿ’ಸೋಜಾ ಅವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ಸಂಜೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗಾಯಾಗೊಂಡ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕುಡಿತದ ಚಟ ಹೊಂದಿದ್ದ ನೆರೆಮನೆಯ ಸುಮಾರು 45 ವರ್ಷ ಪ್ರಾಯದ ವ್ಯಕ್ತಿಯು ಕ್ಷುಲ್ಲಕ ಕಾರಣಗಳಿಗಾಗಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.
ಘಟನೆ ನಡೆಯುವ ಸಂಧರ್ಭ ರೀನಾ ಇನ್ನೋರ್ವ ಮಹಿಳೆಯೊಂದಿಗೆ ತನ್ನ ಮನೆ ಬಳಿ ಮಾತನಾಡುತ್ತಿದ್ದಾಗ ಏಕಾಏಕಿ ಬಂದ ವ್ಯಕ್ತಿ ಹೊಟ್ಟೆಗೆ ಇರಿದಿದ್ದಾನೆ. ರೀನಾ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.