dtvkannada

ಬೆಂಗಳೂರು: ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ K.L.ಮಂಜುನಾಥ್ ತಡರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸದಲ್ಲಿ ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.



ನಿವೃತ್ತ ನ್ಯಾ.ಮಂಜುನಾಥ್, ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರಾಗಿದ್ರು. ಇವರು 1974ರಲ್ಲಿ ವಕೀಲರಾಗಿ ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಆಭ್ಯಾಸ ಮಾಡಿದ್ದರು. ಬಳಿಕ 2000 ಇಸವಿಯಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು. 2001ರಲ್ಲಿ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ತಡರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ರಾಜ್ಯ ಗಡಿ ಆಯೋಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಮಹಾರಾಷ್ಟ್ರಮತ್ತು ಕರ್ನಾಟಕ ಗಡಿ ವಿವಾದ ಸಂಬಂಧ ಸಲಹೆ ನೀಡುವ ಸಲುವಾಗಿ ಸರ್ಕಾರ ಈ ಆಯೋಗವನ್ನು ರಚನೆಮಾಡಿತ್ತು. ಆಯೋಗದ ಹಿಂದಿನ ಅಧ್ಯಕ್ಷ ಎಸ್‌. ರಾಜೇಂದ್ರ ಬಾಬು 2017ರ ನವೆಂಬರ್‌ನಲ್ಲಿ ರಾಜೀನಾಮೆ ಸಲ್ಲಿಸಿದ್ದರು. ಆ ಸ್ಥಾನಕ್ಕೆ ಮಂಜುನಾಥ್ ಅವರನ್ನು ನೇಮಕ ಮಾಡಲಾಗಿತ್ತು.

By dtv

Leave a Reply

Your email address will not be published. Required fields are marked *

error: Content is protected !!