ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯಲ್ಲೇ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಪಿ ಅಗ್ರಹಾರದಲ್ಲಿ ನಡೆದಿದೆ.
ಬೆಂಗಳೂರಿನ ಕೆಪಿ ಅಗ್ರಹಾರದ ಚೆಲುವಪ್ಪಗಾರ್ಡನ್ ನಿವಾಸಿ ರಾಜು ಮತ್ತು ಜಯಂತಿ ದಂಪತಿಯ ದ್ವಿತೀಯ ಪುತ್ರಿ ಪೂಜಾ(16) ವಯಸ್ಸಿನ ಮೃತ ವಿದ್ಯಾರ್ಥಿನ ಘಟನೆಗೆ ನಿಖರವಾದಾದ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗದ ಕಾರಣ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರಾಜು ಭದ್ರತಾ ಸಿಬ್ಬಂದಿ ಮತ್ತು ಪೇಟಿಂಗ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು ಇವರ ಪತ್ನಿ ಜಯಂತಿ ತನ್ನ ಮನೆಯಲ್ಲಿಯೇ ಟೈಲರಿಂಗ್ ಕೆಲಸ ಮಾಡುತ್ತಿದ್ದು ದಂಪತಿಗೆ ಮೂವರು ಹೆಣ್ಣು ಮಕ್ಕಳು. ಈ ಪೈಕಿ ದ್ವಿತೀಯ ಪುತ್ರಿ ಪೂಜಾ ಖಾಸಗಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಳೆಂದು ತಿಳಿದು ಬಂದಿದೆ.
ಜ.22 ರಾತ್ರಿ 9 ಗಂಟೆಯ ಸುಮಾರಿಗೆ ಮನೆ ಸಮೀಪದ ಸಂಬಂಧಿಕರ ಮನೆಗೆ ದಂಪತಿಗಳು ತೆರಳಿದ್ದರು. ರಾತ್ರಿ 10 ಗಂಟೆಗೆ ವಾಪಸ್ ಬಂದು ನೋಡುವಾಗ ಪೂಜಾ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದ್ದು ಆದರೆ ಈ ಘಟನೆಗೆ ಕಾರಣ ತಿಳಿದಿಲ್ಲ ಎಂದು ಪೋಷಕರು ಹೇಳುತ್ತಿದ್ದಾರೆ. ಕೆ.ಪಿ.ಅಗ್ರಹಾರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.