ಮೈಸೂರು: ಶಾಲೆಯಲ್ಲಿ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಇದೀಗ ವೈರಲ್ ಆಗುತ್ತಿದೆ.

ಶಾಲೆಯ ಖಾಲಿ ಕೊಠಡಿಯಲ್ಲಿ ವಿದ್ಯಾರ್ಥಿನಿ ಜೊತೆಗೆ ಶಿಕ್ಷಕ ಸರಸ-ಸಲ್ಲಾಪ ನಡೆಸುತ್ತಿರುವ ವೀಡಿಯೋವನ್ನು ವಿದ್ಯಾರ್ಥಿಗಳೇ ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆಂದು ತಿಳಿದು ಬಂದಿದೆ. ಇದೀಗ ವೀಡಿಯೋ ವೈರಲ್ ಆದ ಹಿನ್ನೆಲೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿದ್ದು, ಶಾಲೆಗೆ ಭೇಟಿ ನೀಡಿ ಪರಿಶೀಲಿಸುವ ಭರವಸೆಯನ್ನು ಬಿಇಓ ನೀಡಿದ್ದಾರೆ.
ಸಾಮಾನ್ಯವಾಗಿ ತಂದೆ, ತಾಯಿ ಬಳಿಕ ವಿದ್ಯೆ ಕಲಿಸುವ ಗುರುವಿಗೆ ಭಾರತೀಯ ಪರಂಪರೆಯಲ್ಲಿ ಪೂಜ್ಯ ಸ್ಥಾನವಿದೆ ಇದು ಎಲ್ಲರಿಗೂ ತಿಳಿದಿರುವ ಸಂಗತಿ ಅದೇ ರೀತಿ ಶಿಕ್ಷಕನನ್ನು ದೇವರು ಎಂದು ಕೂಡ ಪರಿಗಣಿಸಲಾಗುತ್ತದೆ. ಆದರೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಜೊತೆಗೆ ರಾಸಲೀಲೆಯಲ್ಲಿ ತೊಡಗಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ.