';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಅಡ್ಡೂರು ಸಮೀಪದ ಕಾಜಿಲ ಎಂಬಲ್ಲಿ ಸೋಮವಾರ ಟಿಪ್ಪರ್ ಮತ್ತು ರಿಕ್ಷಾ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಮೃತ ಬಾಲಕಿಯನ್ನು ಕರಿಯಂಗಳ ಗ್ರಾಮದ ಪಳ್ಳಿಪಾಡಿಯ ಆಸ್ನಾ (16) ಎಂದು ತಿಳಿದು ಬಂದಿದೆ.
ತಾಯಿಯ ಜೊತೆ ರಿಕ್ಷಾದಲ್ಲಿ ಗುರುಪುರ ಕೈಕಂಬದತ್ತ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಕೈಕಂಬದತ್ತ ಹೋಗುತ್ತಿದ್ದಾಗ ಪೊಳಲಿ ದ್ವಾರದಿಂದ ಅಡ್ಡೂರಿನತ್ತ ಅತಿ ವೇಗ ಮತ್ತು ಅಜಾಗರೂಕತೆಯಿಂದ ರಾಂಗ್ ಸೈಡ್‌ನಲ್ಲಿ ಚಲಿಸುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಇದರಿಂದ ರಿಕ್ಷಾ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ರಸ್ತೆಯ ಪಕ್ಕಕ್ಕೆ ಎಸೆಯಲ್ಪಟ್ಟಿತ್ತು. ತಕ್ಷಣ ಸ್ಥಳೀಯರು ಗಂಭೀರ ಗಾಯಗೊಂಡಿದ್ದ ತಾಯಿ, ಮಗಳು ಹಾಗೂ ರಿಕ್ಷಾ ಚಾಲಕನನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಚಿಕಿತ್ಸೆ ಫಲಕರಿಯಾಗದೆ ಮಂಗಳವಾರ ಬಾಲಕಿ ಆಸ್ನಾ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.