dtvkannada

ಮಂಗಳೂರು: ದುಬೈಯಿಂದ ಮಂಗಳೂರಿಗೆ ಬಂದಿಳಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಪ್ರಯಾಣಿಕನೋರ್ವ 584 ಗ್ರಾಂ ತೂಕದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದುದನ್ನು ನಿನ್ನೆ ರಾತ್ರಿ ಕಸ್ಟಮ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿರುವ ವೇಳೆ ಪ್ರಯಾಣಿಕನೋರ್ವನ ಬಳಿ 29,14,160 ರೂ. ಮೌಲ್ಯದ 584 ಗ್ರಾ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಚಿನ್ನವನ್ನು ಪೇಸ್ಟ್ ರೂಪದಲ್ಲಿ ದೇಹದೊಳಗಿಟ್ಟು ಸಾಗಿಸುತ್ತಿದ್ದುದನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!