';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಧಾರವಾಡ: ವಾಯುವ್ಯ ಸಾರಿಗೆ ನಿಗಮಕ್ಕೆ ಸೇರಿದ ಬಾಗಲಕೋಟೆ-ಹುಬ್ಬಳ್ಳಿ ಬಸ್ ಪಲ್ಟಿಯಾದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬೆಣ್ಣೆಹಳ್ಳದ ಬಳಿ ನಡೆದಿದೆ.
ಹಳ್ಳಕ್ಕೆ ಬಿದ್ದ ಬಸ್‌ನಲ್ಲಿ 30 ಜನ ಪ್ರಯಾಣಿಸುತ್ತಿದ್ದು 20 ಮಂದಿಗೆ ಗಂಭೀರ ಗಾಯವಾಗಿದೆ. ಬಸ್ ಬಾಗಲಕೋಟೆಯಿಂದ ಹುಬ್ಬಳ್ಳಿ ಕಡೆ ಸಂಚರಿಸುತ್ತಿದ್ದು, ಸ್ಟೇರಿಂಗ್ ತುಂಡಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಬಸ್ ರಸ್ತೆಯ ಪಕ್ಕದ ಹೊಲಕ್ಕೆ ನುಗ್ಗಿ, ಹಳ್ಳಕ್ಕೆ ಬಿದ್ದು ಪಲ್ಟಿಯಾಗಿ ಬಿದ್ದಿದೆ.
ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ, ಗಾಯಾಳುಗಳನ್ನು ನವಲಗುಂದ ಆಸ್ಪತ್ರೆಗೆ ಸಾಗಿಸಿದ್ದಾರೆ.