dtvkannada

ಶಿವಮೊಗ್ಗ: ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಬಳಿ ನಡೆದಿದೆ.

ವೇಗವಾಗಿ ಬಂದ ಟಿಪ್ಪರ್ ಡಿವೈಡರ್​ಗೆ ಗುದ್ದಿ ನಂತರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.

ಮೃತ ವ್ಯಕ್ತಿಗಳನ್ನು ಷಣ್ಣುಗ್ (39) ಮತ್ತು ರಾಮಚಂದ್ರ (40) ಎಂದು ಗುರುತಿಸಲಾಗಿದೆ. ಟಿಪ್ಪರ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಘಟನೆ ಬಳಿಕ ಟಿಪ್ಪರ್ ಗಾಡಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ.

ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತ ದುರ್ದೈವಿಗಳು ಭದ್ರಾವತಿ ನಗರದ ನಿವಾಸಿಗಳಾಗಿದ್ದು, ಭದ್ರಾವತಿಯಿಂದ ತೀರ್ಥಹಳ್ಳಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಸದ್ಯ ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!