dtvkannada

ಬೆಂಗಳೂರು: ಭುಜದೆತ್ತರಕ್ಕೆ ಬೆಳೆದ ಮಕ್ಕಳ ಅಗಲಿಕೆಯಿಂದಾಗುವ ನೋವನ್ನು ಅನುಭವಿಸಿದ್ದೇನೆ ಎಂದು ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪನವರ ಮೊಮ್ಮಗಳ ಸಾವಿಗೆ ಕಂಬನಿ ಮಿಡಿದಿರುವ ಅವರು, ‘ನನ್ನ ದೀರ್ಘ ಕಾಲದ ರಾಜಕೀಯ ಸಂಗಾತಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳ ಸಾವಿನ ಸುದ್ದಿ ಕೇಳಿ ಮನಸಿಗೆ ಘಾಸಿಯಾಯಿತು’ ಎಂದು ಟ್ವೀಟಿಸಿದ್ದಾರೆ. 

‘ಭುಜದೆತ್ತರಕ್ಕೆ ಬೆಳೆದ ಮಕ್ಕಳು, ಕುಟುಂಬ ಸದಸ್ಯರ ಅಗಲಿಕೆಯಿಂದಾಗುವ ನೋವು, ಸಂಕಟವನ್ನು ನಾನು ಕಂಡಿದ್ದೇನೆ, ಅನುಭವಿಸಿದ್ದೇನೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸೌಂದರ್ಯ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ವಿರೋಧ ಪಕ್ಷದ ನಾಯಕ ಸಂತಾಪ ಸೂಚಿಸಿದ್ದಾರೆ. 

ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ (30) ಅನುಮಾನಾಸ್ಪದ ರೀತಿಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

‘ಸೌಂದರ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು, ತನಿಖೆಯಿಂದಲೇ ನಿಖರ ಮಾಹಿತಿ ತಿಳಿಯಬೇಕಿದೆ. ಪತಿ ಹಾಗೂ ಕುಟುಂಬದವರು ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಹೈಗ್ರೌಂಡ್ಸ್ ಠಾಣೆ ಮೂಲಗಳು ಹೇಳಿವೆ.

By dtv

Leave a Reply

Your email address will not be published. Required fields are marked *

error: Content is protected !!