';
}
else
{
echo "Sorry! You are Blocked from seeing the Ads";
}
?>

';
}
else
{
echo "Sorry! You are Blocked from seeing the Ads";
}
?>
ಬಂಟ್ವಾಳ: ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣೆಮಂಗಳೂರಿನಲ್ಲಿ ಇಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬಂಟ್ವಾಳ ಸಜಿಪಮುನ್ನೂರು ಗ್ರಾಮದ ಮಡಿವಾಳಪಡ್ಪು ನಿವಾಸಿ ದೇವಪ್ಪ ಮಡಿವಾಳ (60) ಎಂದು ಗುರುತಿಸಲಾಗಿದೆ.
ಪ್ರಗತಿಪರ ಕೃಷಿಕರಾಗಿದ್ದ ಇವರು, ಇಂದು ಬೆಳಗ್ಗೆ ಮನೆಯಿಂದ ಹೊರಟಿದ್ದು ಪಾಣೆಮಂಗಳೂರು ಕಿರುಸೇತುವೆ ಬಳಿ ನೀರಿಗೆ ಹಾರಿದ್ದಾರೆ.

ಮೃತದೇಹವನ್ನು ಸಾರ್ವಜನಿಕರು ಮೆಲೆತ್ತಿದ್ದು ಶವದ ಗುರುತನ್ನು ತನ್ನ ಮಗನೇ ಬಂದು ಗುರುತು ಪತ್ತೆ ಹಚ್ಚುವ ಮನಕಳುಕುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.