ನೆಲ್ಯಾಡಿ: ಸಿಮೆಂಟ್ ಸಾಗಾಟದ ಲಾರಿ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.
![](http://dtvkannada.in/wp-content/uploads/2022/01/IMG-20220131-WA0055.jpg)
ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದಿಂದಾಗಿ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಕಾರಿನ ಮುಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
![](http://dtvkannada.in/wp-content/uploads/2022/01/IMG-20220131-WA0054.jpg)
ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ