dtvkannada

ವಿಟ್ಲ: ರಿಕ್ಷಾ ಚಾಲಕನೋರ್ವ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ‌ ಆರೋಪದಲ್ಲಿ ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಕಂಬಳಬೆಟ್ಟು ನಿವಾಸಿ ಅಬ್ದುಲ್‌ ನಾಸಿರ್‌ ಎಂದು ತಿಳಿದು ಬಂದಿದೆ.

ಪರಿಚಯವಿದ್ದ ಅಪ್ರಾಪ್ತ ಬಾಲಕಿಯನ್ನು ತನ್ನ ಆಟೋ ರಿಕ್ಷಾದಲ್ಲಿ ಬಾಲಕಿಯನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಅಬ್ದುಲ್ ನಾಸಿರ್ ಆ ಬಳಿಕ ಆಕೆಯ ಮನೆಗೆ ಆಗಾಗ ಬರುತ್ತಿದ್ದು ಮನೆಗೆ ಬಾರದಂತೆ ಆತನಿಗೆ ಎಚ್ಚರಿಕೆ ನೀಡಿದ್ದರು.

ಸಂಶಯಗೊಂಡ ಮನೆಯವರು ಆಕೆಯನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಆತ ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬಾಲಕಿಯ ತಾಯಿ ವಿಟ್ಲ ಠಾಣಾ ಪೊಲೀಸರಿಗೆ ನೀಡಿದ‌ ದೂರಿನಲ್ಲಿ ವಿವರಣೆ ನೀಡಿದ್ದು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆಂದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!