ಉಡುಪಿ: ಈಗಾಗಲೇ ಜಿಲ್ಲೆಯಾದ್ಯಂತ ಹಿಜಾಬ್ ಮತ್ತು ಕೇಸರಿ ಶಾಲುಗಳು ಕಾಲೇಜು ಆವರಣದಲ್ಲಿ ಸದ್ದು ಮಾಡುತ್ತಿರುವುದು ಹೆಚ್ಚಾಗುತ್ತಿರುವುದು ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಲಿದೆ.

ಉಡುಪಿ ಹಾಗೂ ಕುಂದಾಪುರದ ಕಾಲೇಜಿನಲ್ಲಿ ಹಿಜಾಬ್ ಪ್ರಕರಣ ಸದ್ದು ಮಾಡುತ್ತಿದ್ದಂತೆ ಇತ್ತ ಕುಂದಾಪುರದ ಪೇಟೆಯಲ್ಲಿರುವ ಖಾಸಗಿ ಕಾಲೇಜಿನ ಆವರಣಕ್ಕೆ ಕೆಲವು ವಿದ್ಯಾರ್ಥಿಗಳು ನಂತರ ಕಾಲೇಜು ಬಳಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.

ಈ ವೇಳೆ ಕೇಸರಿ ಶಾಲು ಧರಿಸಿ ಘೋಷಣೆ ಕೂಗುತ್ತ ಬಂದವರಿಗೆ ಕಾಲೇಜಿಗೆ ಅವಕಾಶ ನೀಡಲಿಲ್ಲ ಎಂದು ತಿಳಿದು ಬಂದಿದೆ.