dtvkannada

ಮಂಗಳೂರು: ನಗರದ ಚಿಲಿಂಬಿ ಬಳಿಯ ಕೋಟೆಕಣಿ ರಸ್ತೆ ಮತ್ತು ಕುಳೂರು ಫೆರ್ರಿ ರಸ್ತೆಯಲ್ಲಿ ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಘಟನೆ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಬೈಕ್‌ ಸವಾರರು ಗಾಯಗೊಂಡಿದ್ದಾರೆ.

ನಿನ್ನೆ ಸಂಜೆ 4 ಗಂಟೆಗೆ ಕಾರೊಂದು ಕೋಟೆಕಣಿಯಿಂದ ಇಳಿಜಾರಿನ ರಸ್ತೆಯಲ್ಲಿ ತೆರಳುತ್ತಿರುವ ವೇಳೆ, ಲೇಡಿಹಿಲ್‌ನಿಂದ ಉರ್ವಾ ಸ್ಟೋರ್‌ ಕಡೆಗೆ ಹೋಗುತ್ತಿದ್ದ ಹೋಂಡಾ ಆಕ್ಟಿವಾಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಆಕ್ಟಿವಾದಲ್ಲಿದ್ದ ಇಬ್ಬರು ಸವಾರರು ರಸ್ತೆ ಬದಿಗೆ ಬಿದ್ದಿದ್ದಾರೆ.

ಕಾರು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಪಕ್ಕದ ಅಪಾರ್ಟ್‌ಮೆಂಟ್ ನ ಕಾಂಪೌಂಡ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ.

By dtv

Leave a Reply

Your email address will not be published. Required fields are marked *

error: Content is protected !!