ಬೆಂಗಳೂರು: ಯಾವುದೇ ಕಾರಣಕ್ಕೂ ಕರ್ನಾಟಕವನ್ನು ತಾಲಿಬಾನ್ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ
ಈಗಾಗಲೇ ಚರ್ಚೆಯಾಗುತ್ತಿರುವ ಹಿಜಾಬ್-ಕೇಸರಿ ಶಾಲು ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜನ ಮಾನಸದಲ್ಲಿ ಶಾಲಾ-ಕಾಲೇಜುಗಳಿಗೆ ಸಮವಸ್ತ್ರ ಬೇಕು ಎಂಬ ಅಭಿಪ್ರಾಯವಿದೆ.
ಖುಷಿ ಬಂದಾಗ ಒಬ್ಬೊಬ್ಬರು ಒಂದೊಂದು ವಸ್ತ್ರ ಹಾಕಿಕೊಂಡು ಬರೋದಕ್ಕೆ ಅಲ್ಲ. ನಿಯಮಗಳು ಅನ್ನೋದಕ್ಕಿಂತ ಇದೊಂದು ಸಂಪ್ರದಾಯವಾಗಿದೆ ಎಂದರು.
ಕರ್ನಾಟಕ, ಉಡುಪಿ, ಮಂಗಳೂರು ಜಿಲ್ಲೆಯನ್ನ ತಾಲಿಬಾನ್ ಮಾಡಲು ಬಿಡೋದಿಲ್ಲ ಎಂದು ಹೇಳಿದರು.
ಸಮವಸ್ತ್ರ ನಿಯಮಕ್ಕೆ ಸಮಿತಿ ರಚನೆ ಮಾಡೋದಾಗಿ ಶಿಕ್ಷಣ ಇಲಾಖೆ ಈಗಾಗಲೇ ಸ್ಪಷ್ಟ ಮಾಡಿದೆ. ಶೀಘ್ರವಾಗಿ ಸುತ್ತೋಲೆ ನೀಡೋದಾಗಿ ಹೇಳಿದೆ. ಪ್ರವಾಸ ಭಾಗ್ಯ, ಶಾದಿ ಭಾಗ್ಯ ಇಟ್ಟುಕೊಂಡು ಎಲ್ಲದ್ರ ನಡುವೆ ಜಾತಿ ವಿಷ ಬೀಜ ಬಿತ್ತಿದವರು ಸಿದ್ದರಾಮಯ್ಯ ಎಂದರು.
ಆ ವಿಷ ಬೀಜದ ಮುಂದುವರೆದ ಭಾಗವೇ ಇದು. ಮೊದಲು ಇಸ್ಲಾಂ ಸಂಘಟನೆಗಳು ಇದರ ಹಿಂದೆ ಅಂತ ಅನ್ನಿಸುತ್ತಿತ್ತು. ಈಗ ಸಿದ್ದರಾಮಯ್ಯ, ಖಾದರ್ ಹೇಳಿಕೆ ನೋಡಿದ್ರೆ ಇದ್ರ ಹಿಂದೆ ಇವ್ರು ಇದ್ದಂತೆ ಕಾಣ್ತಿದೆ ಎಂದು ಆರೋಪಿಸಿದರು.