ಪುತ್ತೂರು: ಉಪ್ಪಿನಂಗಡಿ ರಥಬೀದಿ ನಿವಾಸಿಯಾದ ಪುತ್ತೂರಿನ ಖ್ಯಾತ ಹಿರಿಯ ಪತ್ರಕರ್ತ ಶ್ರೀ ಬಿ.ಟಿ.ರಂಜನ್ ಶೆಣೈ(60)ಯವರ ಆರೋಗ್ಯದಲ್ಲಿ ಏರುಪೇರಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ಮಧ್ಯಾಹ್ನ ದಾಖಲಾಗಿದ್ದರು.
ಆದರೆ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮುಂಜಾನೆ ನಿಧನ ಹೊಂದಿದ್ದಾರೆಂದು ತಿಳಿದು ಬಂದಿದೆ.
ಇವರು ಮಂಗಳೂರಿನ ಭಾಗದ ಪತ್ರಿಕಾ ಲೋಕದ ವಡ್ಸರ್ಸೆ ರಘುರಾಮ ಶೆಟ್ಟಿಯವರ ಮುಂಗಾರು ಪತ್ರಿಕೆಯಲ್ಲಿ ವೃತ್ತಿ ಜೀವನ ಆರಂಭಿಸಿದ್ದು ಆನಂತರ ಮಂಗಳೂರು ಮಿತ್ರ, ಹೊಸ ದಿಗಂತ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದರು ತದನಂತರ 26 ವರ್ಷಗಳ ಕಾಲ ಉದಯವಾಣಿ ಪತ್ರಿಕೆಯಲ್ಲಿ ವಿವಿಧ ಹುದ್ದೆಯಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದರು. 2017 ರಲ್ಲಿ ಉದಯವಾಣಿಗೆ ರಾಜೀನಾಮೆ ನೀಡಿದ ಬಳಿಕ ಮತ್ತೆ ಹೊಸದಿಗಂತ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದರೆಂದು ತಿಳಿದು ಬಂದಿದೆ.
ಇವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹತ್ತು ಹಲವು ಪುರಸ್ಕಾರ, ಪ್ರಶಸ್ತಿ ಸನ್ಮಾನಗಳು ಸಂದಿದ್ದು ಅಪಾರ ಬಂಧು ಬಳಗವನ್ನು ಹೊಂದಿದ್ದು ಇಂದು ಎಲ್ಲರನ್ನೂ ಬಿಟ್ಟು ಇಹಲೋಕ ತ್ಯಜಿಸಿದ್ದಾರೆ.