';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮೈಸೂರು: ಕುಂದಾಪುರದಲ್ಲಿ ನಡೆಯುತ್ತಿರುವ ಕಾಲೇಜು ಮಕ್ಕಳ ಹಿಜಾಬ್,ಕೇಸರಿ ಶಾಲು ಬಗ್ಗೆ ಮಾತನಾಡಿದ ಸಂಸದರು ಹಿಜಾಬ್ , ಟೋಪಿ ಹಾಕಿಕೊಂಡು ಮದರಸಗೆ ಹೋಗಿ ಸರ್ಕಾರಿ ಶಾಲೆಗಲ್ಲ ಎಂದು ಪ್ರತಾಪ್ ಸಿಂಹ ಖಡಕ್ ಆಗಿ ಹೇಳಿದ್ದಾರೆ.
ಹಿಜಾಬ್ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಕಾಲೇಜಿಗೆ ಜಾಬ್ ಗಾಗಿ ಬರುತ್ತಾರೆ, ಆದರೆ ನೀವು ‘ಹಿಜಾಬ್ ಗಾಗಿ ಬರುತ್ತೀದ್ದೀರಾ? ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಸಗೆ ಹೋಗಿ. ಮದರಸದಲ್ಲಿ ನಿಮ್ಮ ಪ್ರತ್ಯೇಕ ಭಾವನೆ ಕಾಪಾಡಿಕೊಳ್ಳಬಹುದು. ಆದರೆ ಸರ್ಕಾರಿ ಶಾಲೆಗಳಲ್ಲಿ ಈ ಪ್ರತ್ಯೇಕತೆ ಸಾಧ್ಯವಿಲ್ಲ. ಇದು ಬ್ರಿಟಿಷರ ಭಾರತವಲ್ಲ, ಇದು ಭರತ ಖಂಡ ಎಂದು ಹೇಳಿದರು.
ಹಿಂದೂ ಧರ್ಮದ ಬುನಾದಿ ಮೇಲಿರುವ ದೇಶವಿದು. ಇಲ್ಲಿ ಗಣಪತಿ ಪೂಜೆ, ಹೆಣ್ಣು ಮಕ್ಕಳ ಕುಂಕುಮ ಸಂಸ್ಕೃತಿಯ ಭಾಗ. ಇದನ್ನು ಯಾರು ಪ್ರಶ್ನಿಸುವಂತಿಲ್ಲ. ಈ ನೆಲದ ಸಂಸ್ಕೃತಿಯನ್ನು ಕ್ರಿಶ್ಚಿಯನ್, ಇಸ್ಲಾಂ ಧರ್ಮಗಳು ಒಪ್ಪಿಕೊಳ್ಳಬೇಕು ಹೇಳಿದರು.