ಮಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಕುರಿತು ನಡೆಯುತ್ತಿರುವ ಚರ್ಚೆಗಳಲ್ಲಿ ಸರಕಾರದ ನಿಲುವಿಗೆ ಸಮರ್ಥನೆ ವ್ಯಕ್ತಪಡಿಸಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಿಗೆ ಕೊಲೆ ಬೆದರಿಕೆ ಬಂದ ಘಟನೆ ನಡೆದಿದೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿ, ಈ ಬಗ್ಗೆ ದೂರು ದಾಖಲಿಸಿದ್ದೇವೆ. ತನಿಖೆ ನಡೆಯುತ್ತಿದೆ. ಇಂತಹ ಗೊಡ್ಡು ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ರಹೀಮ್ ಉಚ್ಚಿಲ್ ಹೇಳಿಕೆ ನೀಡಿದ್ದಾರೆ.
ಈ ಹಿಂದೆ ಕೂಡಾ ಮಾರಾಣಾಂತಿಕ ಹಲ್ಲೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವರಿಗೆ ಗನ್‌ಮ್ಯಾನ್ ಮೂಲಕ ಭದ್ರತೆ ನೀಡಿತ್ತು.
ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಮಾಧ್ಯಮ ಚರ್ಚೆಗಳಲ್ಲಿ ಭಾಗವಹಿಸುತ್ತಿರುವ ಹಾಗೂ ಮಾಧ್ಯಮಗಳಿಗೆ ಸರಕಾರದ ಪರ ನಿಲುವು ವ್ಯಕ್ತಪಡಿಸಿದ್ದಕ್ಕೆ 9477636639 ಮೂಲಕ ಕೊಲೆ ಬೆದರಿಕೆ ಕರೆ ಬಂದಿದೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.