dtvkannada

ಬೆಂಗಳೂರು: ಕರ್ನಾಟಕದಲ್ಲಿ ಹಿಜಾಬ್- ಕೇಸರಿ ಶಾಲಿನ ವಿವಾದ ಭುಗಿಲೆದ್ದ ಬೆನ್ನಲ್ಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿ ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಬೇಕಾದುದುದ ಕಡ್ಡಾಯವಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿ ಮೇಲ್ವಿಚಾರಣಾ ಸಮಿತಿ ನಿರ್ಧರಿಸುವ ಸಮವಸ್ತ್ರ ಧರಿಸಬೇಕು. ಒಂದುವೇಳೆ ಆಡಳಿತ ಮಂಡಳಿ ಸಮವಸ್ತ್ರ ನಿಗದಿಪಡಿಸದೆ ಇದ್ದರೆ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಿರುವ ಉಡುಪು ಧರಿಸಬೇಕು ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಏಕರೂಪದ ವಸ್ತ್ರಸಂಹಿತೆಯನ್ನು ಜಾರಿ ಮಾಡಿದೆ. ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಕಲಂ 133ರ ಅನ್ವಯ ರಾಜ್ಯ ಸರ್ಕಾರದ ಎಲ್ಲಾ ಶಾಲೆ ಕಾಲೇಜುಗಳಲ್ಲಿ ಸರ್ಕಾರ ನಿಗದಿ ಮಾಡಿರುವ ಸಮವಸ್ತ್ರವನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಲ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮ್ಮ ಧರ್ಮದ ಅನುಸಾರ ಆಚರಣೆಗಳನ್ನು ಪಾಲಿಸುತ್ತಿರುವುದು ಕಂಡುಬಂದಿದ್ದು, ಇದರಿಂದ ಸಮಾನತೆ ಮತ್ತು ಏಕತೆಗೆ ಧಕ್ಕೆ ಬರುತ್ತಿರುವುದನ್ನು ಮನಗಂಡು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

By dtv

Leave a Reply

Your email address will not be published. Required fields are marked *

error: Content is protected !!