ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಸಂಹಿತೆ ಪಾಲಿಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆದರೂ ಇಂದು ರಾಜ್ಯದ ಬಹುತೇಕ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಹಾಗೂ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಇದರಿಂದ ಕಾಲೇಜು ಆಡಳಿತ ಮಂಡಳಿಗೆ ತಲೆ ನೋವಾಗಿದ್ದು ಮುಂದೆ ಏನು ಎಂಬ ಭಯದಲ್ಲಿ ಕುಳಿತಿದ್ದಾರೆ. ಈ ನಡುವೆ ಚಿಕ್ಕಮಗಳೂರಿನ ಐಡಿಎಸ್ಸ್ ಕಾಲೇಜ್‌ನಲ್ಲಿ ಶಿರವಸ್ತ್ರ ಹಿಜಾಬ್ ಬೆಂಬಲಿಸಿ ಕೆಲವು ವಿದ್ಯಾರ್ಥಿಗಳು ನೀಲಿ ಶಾಲು ಹಾಕುವ ಮೂಲಕ ಹಿಜಾಬ್ ತೆಗೆಸಬಾರದು ಎಂದು ಆಗ್ರಹಿಸಿದ್ದಾರೆ.
ಇವತ್ತು ನೀಲಿ ಶಾಲು ಹಾಕಿ ಬಂದ ವಿದ್ಯಾರ್ಥಿಗಳು ಜೈಭೀಮ್ ಘೋಷಣೆ ಕೂಗಿ ಹಿಜಾಬ್ ಪರ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದ್ದಾರೆ. ಇದು ಕೇಸರಿ ಪಾಲಯಕ್ಕೆ ತಲೆನೋವಾಗಿದೆ.
ಸದ್ಯ ಕೆಲ ಕಾಲೇಜುಗಳಲ್ಲಿ ರಜೆ ಘೋಷಿಸಲಾಗಿದೆ. ಕೆಲವು ಕಡೆ ವಿದ್ಯಾರ್ಥಿಗಳಿಗೆ ಕ್ಲಾಸ್ ರೂಂ ಪ್ರವೇಶಕ್ಕೆ ತಡೆ ಹಿಡಿಯಲಾಗಿದೆ. ಮತ್ತೇ ಕೆಲವು ಕಡೆ ಕಾಲೇಜುಗಳ ಮುಂದೆ ವಿದ್ಯಾರ್ಥಿಗಳು ಜೈಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದಾರೆ.