dtvkannada

ಬಾಗಲಕೋಟೆ: ರಾಜ್ಯಾದ್ಯಂತ ಹಿಜಾಬ್‌ ಹಾಗೂ ಕೇಸರಿ ಗಲಾಟೆ ನಡೆಯುತ್ತಿದ್ದು ಈ ಮಧ್ಯೆ ಬಾಗಲಕೋಟೆಯ ಬನಹಟ್ಟಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿದೆ.

ಇದರಿಂದ ಓರ್ವನಿಗೆ ಗಾಯವಾಗಿದ್ದು
ಕಾಲೇಜು ಒಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಂದ ಧರಣಿ ನಡೆಯುತ್ತಿದೆ. ರಬಕವಿಬನಹಟ್ಟಿಯಲ್ಲಿ ಈ ಘಟನೆ ನಡೆದಿದೆ.

ಕೇಸರಿ ಶಾಲು ಧರಿಸಿ ಬಂದ ABVPಯ ಕಾರ್ಯಕರ್ತರು ಕಾಲೇಜಿಗೆ ಮತ್ತು ಮುಸ್ಲಿಮ್ ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆಂದು ತಿಳಿದು ಬಂದಿದೆ.

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಹಾಕುವ ಕುರಿತು ಎರಡು ಕೋಮಿನ ವಿದ್ಯಾರ್ಥಿಗಳ ನಡುವೆ ವಿವಾದ ಉಂಟಾಗಿದ್ದು, ಈ ನಡುವೆ ಎಬಿವಿಪಿ ಕಾರ್ಯಕರ್ತರು ಕಲ್ಲುತೂರಾಟ ನಡೆಸಿದ್ದಾರೆಂದು ಮಾಹಿತಿ ಬಂದಿದೆ.

ಈಗಾಗಲೇ ಕಾಲೇಜಿಗೆ ರಜೆ ನೀಡಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲು ಪ್ರಾಧ್ಯಾಪಕರು ಹರಸಾಹಸ ಪಡುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗುವ ಸಾಧ್ಯತೆ ಇದೆ.

By dtv

Leave a Reply

Your email address will not be published. Required fields are marked *

error: Content is protected !!